

ಉಡುಪಿ: ಉಡುಪಿ ಜಿಲ್ಲೆಯ 4 ಶಿಶು ಅಭಿವೃದ್ದಿ ಯೋಜನಾ ವ್ಯಾಪ್ತಿಯಲ್ಲಿರುವ 24 ಅಂಗನವಾಡಿ ಕಂ ಕ್ರಷ್ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿಯರ ಗೌರವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅದೇ ಗ್ರಾಮದ/ವಾರ್ಡಿನ/ಸ್ಥಳೀಯ ಅಂಗನವಾಡಿ ಕಂ ಕ್ರಷ್ ಕೇಂದ್ರದ ಸರ್ವೆ ವ್ಯಾಪ್ತಿಯಲ್ಲಿ ವಾಸವಿರುವ, ಹತ್ತನೇ ತರಗತಿ ಉತ್ತೀರ್ಣರಾಗಿರುವ 35 ವರ್ಷದೊಳಗಿನ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ ೨೯. ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ ದೂ.ಸಂ: 0820-2574978, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ಬ್ರಹ್ಮಾವರ:0820-2562244, ಕಾರ್ಕಳ:0858-230992 ಕುಂದಾಪುರ:08254-230807 ಹಾಗೂ ಉಡುಪಿ:0820-2524055 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.