ಉಡುಪಿ, ಆಗಸ್ಟ್ 30: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ ಕಾರ್ಯಕ್ರಮದಡಿ ಮೀನು ಮಾರಾಟಕ್ಕಾಗಿ 4 ಚಕ್ರ ವಾಹನ ಖರೀದಿಗೆ ಸಹಾಯಧನ ಸೌಲಭ್ಯ ನೀಡಲಾಗುತ್ತಿದ್ದು, ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರು ಅಥವಾ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.