logo
AADYA ELECTRONICS.jpg
SHARADA TECHERS.jpeg
hindalco everlast.jpeg

ಉಡುಪಿ: ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸೂಚನೆ

ಟ್ರೆಂಡಿಂಗ್
share whatsappshare facebookshare telegram
25 Apr 2025
post image

ಉಡುಪಿ: ಪರಿಶಿಷ್ಟ ಜಾತಿ ಒಳಮೀಸಲಾತಿಗಾಗಿ ಸಮೀಕ್ಷೆ ನಡೆಸುವ ಬಗ್ಗೆ ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ಸಮೀಕ್ಷೆ ನಡೆಸಲು ಈಗಾಗಲೇ ರಚಿಸಿರುವ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯು ಪರಿಶಿಷ್ಟ ಜಾತಿ ಕುಟುಂಬಗಳ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು.

ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೇಸ್ವಾನ್ ವಿಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕುರಿತಂತೆ ನ್ಯಾಯಮೂರ್ತಿ ಹೆಚ್.ಎನ್, ನಾಗಮೋಹನದಾಸ್ ಏಕಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಸಮೀಕ್ಷೆ ನಡೆಸುವ ಸಂಬAಧ ನಡೆದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮೇ 5 ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ವಿವಿಧ ಅಂಶಗಳ ಬಗ್ಗೆ ದತ್ತಾಂಶಗಳನ್ನು ಶೇಖರಿಸಿ ಸಮೀಕ್ಷೆ ನಡೆಸುವ ಕಾರ್ಯವು ಶಾಲಾ ಶಿಕ್ಷಕರುಗಳಿಂದ ನಡೆಯಲಿದ್ದು, ಮನೆ ಮನೆಗೆ ದತ್ತಾಂಶ ಶೇಖರಣೆಗೆ ಆಗಮಿಸುವ ಶಿಕ್ಷಕರೊಂದಿಗೆ ಸಾರ್ವಜನಿಕರು ಸಹಕರಿಸಬೇಕು ಎಂದರು.

ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಸಮನ್ವಯ ಸಮಿತಿಯನ್ನು ರಚಿಸಲಾಗಿದ್ದು, ತಾಲ್ಲೂಕಿನ ತಹಸೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಇತರ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ಸಮೀಕ್ಷೆಯ ಮೇಲ್ವೆಚಾರಣೆಗಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮುಖ್ಯ ಶಿಕ್ಷಕರನ್ನು ನಿಯೋಜಿಸಲು ಉಪನಿರ್ದೇಶಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರವರು ಕ್ರಮವಹಿಸಲು ತಿಳಿಸಲಾಯಿತು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲ್ಲೂಕು ನೋಡಲ್ ಅಧಿಕಾರಿಗಳು ಸಮೀಕ್ಷೆಯ ಸಂಪೂರ್ಣ ಮೇಲುಸ್ತುವಾರಿ ವಹಿಸಲು ತಿಳಿಸಿದರು.

ಕುಟುಂಬ ದತ್ತಾಂಶದ ಪ್ರಕಾರ ಗ್ರಾಮ ಹಾಗೂ ನಗರಗಳಲ್ಲಿನ ಕುಟುಂಬವಾರು ಸಂಖ್ಯೆಗಳನ್ನುBreakup ಮಾಡಿ, ತಾಲ್ಲೂಕುಗಳಿಗೆ ಗ್ರಾಮ ಪಂಚಾಯಿತಿವಾರು/ಗ್ರಾಮವಾರು/ವಾರ್ಡ್ವಾರು Password/Login ಮೂಲಕ ಮಾಹಿತಿ ಒದಗಿಸಲಾಗುವುದು. ಅದರಂತೆ HRMS ನಿಂದ ಶಿಕ್ಷಕರನ್ನು Mappin ಮಾಡಿಕೊಂಡು ಸಮೀಕ್ಷಾ ಕಾರ್ಯ ಕೈಗೊಳ್ಳಲು ತಿಳಿಸಲಾಯಿತು. ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಸುಮಾರು 75,000 ಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಇವರ ಸಮೀಕ್ಷೆ ನಡೆಸಲು ಸುಮಾರು 1000 ರಿಂದ 1100 ಗಣತಿದಾರರ ಅವಶ್ಯಕತೆ ಇದ್ದು, ಈ ಕಾರ್ಯಕ್ಕೆ ಶಿಕ್ಷಣ ಇಲಾಖೆಯ ಶಿಕ್ಷಕರನ್ನು ನೇಮಕಮಾಡಬೇಕು ಎಂದ ಅವರು, ಜಿಲ್ಲಾ ಮಾಸ್ಟರ್ ಟ್ರೈನರ್ ಗಳಿಗೆ ತರಬೇತಿಯನ್ನು ಏಪ್ರಿಲ್ 28 ರಂದು ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ತರಬೇತಿ ನೀಡಲಾಗುವುದು. ತರಬೇತಿಗೆ ತಪ್ಪದೇ ಭಾಗವಹಿಸಬೇಕು ಎಂದರು.

ಸರ್ಕಾರದಿಂದ ಕಾಲಕಾಲಕ್ಕೆ ನೀಡುವ ನಿರ್ದೇಶನ ಹಾಗೂ ಮಾರ್ಗಸೂಚಿಗಳನ್ವಯ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕರ್ತವ್ಯ ನಿರ್ವಹಿಸಿ ಸಮೀಕ್ಷೆ ಕಾರ್ಯ ಯಶಸ್ವಿ ಆಗುವಂತೆ ಕ್ರಮವಹಿಸಲು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಆಬೀದ್ ಗದ್ಯಾಳ, ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ ಶ್ರೀನಿವಾಸ್ ರಾವ್, ಸಹಾಯಕ ಕಮೀಷನರ್ ರಶ್ಮಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣ ಸ್ವಾಮಿ, ಡಯಟ್ ಉಪ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2025-04-11 at 6.14.42 PM.jpeg
WhatsApp Image 2025-03-24 at 6.54.49 AM.jpeg
MCC Bank Website Ad English.jpg
WhatsApp Image 2025-01-13 at 14.53.16 (1).jpeg
WhatsApp Image 2024-10-09 at 8.05.11 PM.jpeg
WhatsApp Image 2024-04-29 at 2.40.38 PM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.