



ಕಾರ್ಕಳ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸ ಕಾರ್ಯಕಾರಿ ಮಂಡಳಿಯ ಆಯ್ಕೆ ಪ್ರಕ್ರಿಯೆಯಲ್ಲಿ ಕಾರ್ಕಳ ತಾಲೂಕಿನಿಂದ ಮೂವರು ಪತ್ರಕರ್ತರು ಸ್ಥಾನ ಗಳಿಸಿದ್ದಾರೆ.
ವಿಜಯ ಕರ್ನಾಟಕ ಪತ್ರಿಕೆಯ ವರದಿಗಾರ ಉದಯ ಕುಮಾರ್ ಮುಂಡ್ಕೂರು ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಅವರು ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಸಕ್ರಿಯ ಸದಸ್ಯರಾಗಿದ್ದು, ಕಳೆದ ಅವಧಿಯಲ್ಲಿ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದರು. ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾಪು ವಲಯದ ಮಾಜಿ ಅಧ್ಯಕ್ಷರಾಗಿ ಹಾಗೂ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದಾರೆ.
ಇದೇ ವೇಳೆ, ವಾರ್ತಾಭಾರತಿ ಪತ್ರಿಕೆಯ ವರದಿಗಾರ ಮಹಮ್ಮದ್ ಶರೀಫ್ ಮತ್ತು ಕನ್ನಡ ಪ್ರಭ ಪತ್ರಿಕೆಯ ವರದಿಗಾರ ರಾಂ ಅಜೆಕಾರು ಅವರು ಜಿಲ್ಲಾ ಕಾರ್ಯಕಾರಿಣಿ ಸಮಿತಿಯ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
ಮಹಮ್ಮದ್ ಶರೀಫ್ ಅವರು ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಅನೇಕ ಸಾಮಾಜಿಕ ಹಾಗೂ ಪತ್ರಕರ್ತರ ಸಂಘಟನೆಗಳಲ್ಲಿ ಸಕ್ರಿಯ ಪಾತ್ರವಹಿಸಿದ್ದಾರೆ.
ರಾಂ ಅಜೆಕಾರು ಅವರು ವಿವಿಧ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದು, ಇತ್ತೀಚೆಗೆ ರಾಜ್ಯ ದತ್ತಿನಿಧಿ ಪ್ರಶಸ್ತಿಯನ್ನು ಪಡೆದಿದ್ದರು.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.