logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಎಐ ಬಳಸಿ ವಿಧಾನಸೌಧ ಸ್ಫೋಟದ ನಕಲಿ ವಿಡಿಯೋ ಸೃಷ್ಟಿ: ಯುವಕನ ವಿರುದ್ಧ ಕ್ರಮಕ್ಕೆ ಆಗ್ರಹ

ಟ್ರೆಂಡಿಂಗ್
share whatsappshare facebookshare telegram
20 Oct 2026
post image

ಬೆಂಗಳೂರು: ರಾಜ್ಯದ ಆಡಳಿತ ಕೇಂದ್ರ ವಿಧಾನಸೌಧವನ್ನು ಬಾಂಬ್ ಸ್ಫೋಟದಿಂದ ಧ್ವಂಸಗೊಳಿಸಿದಂತೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಿ ಎಡಿಟ್ ಮಾಡಲಾದ ವಿಡಿಯೋವೊಂದು ಇನ್‌ಸ್ಟಾಗ್ರಾಮ್‌ನಲ್ಲಿ ಹರಿದಾಡುತ್ತಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

‘Jnx king Hg’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋವನ್ನು ಅಪ್‌ಲೋಡ್ ಮಾಡಲಾಗಿದೆ ಎನ್ನಲಾಗಿದೆ. ವಿಧಾನಸೌಧದ ಮುಂಭಾಗದಲ್ಲಿ ಚಿತ್ರೀಕರಿಸಿದ ವಿಡಿಯೋವನ್ನು ಎಐ ತಂತ್ರಜ್ಞಾನ ಬಳಸಿ ಬಾಂಬ್ ಸ್ಫೋಟ ಸಂಭವಿಸಿದಂತೆ ಎಡಿಟ್ ಮಾಡಲಾಗಿದೆ. ಅಲ್ಲದೆ, ವಿಧಾನಸೌಧವನ್ನು ಬಾಂಬ್‌ನಿಂದ ಉಡಾಯಿಸಿರುವುದಾಗಿ ಯುವಕ ಬರೆದುಕೊಂಡಿದ್ದಾನೆ ಎಂದು ವರದಿಯಾಗಿದೆ.

ದಸರಾ ಹಬ್ಬದ ಸಂದರ್ಭದಲ್ಲಿ ಇಂತಹ ವಿಡಿಯೋ ಹಂಚಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸಲು ಯತ್ನಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ವಿಧಾನಸೌಧವು ರಾಜ್ಯದ ಪ್ರಮುಖ ಆಡಳಿತ ಕೇಂದ್ರವಾಗಿದ್ದು, ಭದ್ರತೆಯ ದೃಷ್ಟಿಯಿಂದಲೂ ಮಹತ್ವದ ಸ್ಥಳವಾಗಿದೆ.

ಈ ಹಿನ್ನೆಲೆಯಲ್ಲಿ, ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವ ರೀತಿಯಲ್ಲಿ ವಿಡಿಯೋ ಹಂಚಿಕೊಂಡಿರುವ ವ್ಯಕ್ತಿಯ ವಿರುದ್ಧ ಸೂಕ್ತ ತನಿಖೆ ನಡೆಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಬೆಂಗಳೂರು ಪೊಲೀಸರನ್ನು ಒತ್ತಾಯಿಸಿದ್ದಾರೆ.

WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.